ದಯಾನಿಯ ಸ್ಥಿತಿಯಲ್ಲಿ ರಾಜ್ಯ ಸರ್ಕಾರ – ತಾಹಿರ್ ಹುಸೇನ್
ಭಟ್ಕಳ: ರಾಜ್ಯದ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಸಂತೃಸ್ತರ ರಕ್ಷಣೆಗೆ ಬಾರದ ರಾಜ್ಯ ಹಾಗೂ ಕೇಂದ್ರ ಸರ್ಕಾರ ದಯಾನೀಯ ಸ್ಥಿತಿಯಲ್ಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕದ ರಾಜ್ಯಧ್ಯಕ್ಷ ತಾಹೀರ್ ಹುಸೇನ್ ತಿಳಿಸಿದ್ದಾರೆ.
ಅವರು ಸೋಮವಾರ ಇಲ್ಲಿನ ವೆಲ್ಫೇರ್ ಆಸ್ಪತ್ರೆಯ ಸಭಾಲಯದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಸಂತೃಸ್ಥರಿಗೆ ಸರಿಯಾದ ಮೂಲಭೂತ ಸೌಕರ್ಯವನ್ನು ನೀಡದ ರಾಜ್ಯ ಸರ್ಕಾರದ ಅಸಹಾಯಕ ನೀತಿ, ಪರಿಹಾರ ನೀಡದ ಕೇಂದ್ರ ಸರ್ಕಾರದ ನಿರ್ಲಕ್ಷ ದೋರಣೆಯಿಂದಾಗಿ ಗಂಜಿ ಕೇಂದ್ರಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬ ನರಕ ಯಾತನೆ ಅನುಭವಿಸುತ್ತಿದ್ದು ಬೆಳಗಾವಿಯ ಗಂಜಿ ಕೇಂದ್ರದಲ್ಲಿ 4ವರ್ಷದ ಬಾಲಕ ಸಾವನ್ನಪ್ಪಿರುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ದೇಶದ ಆರ್ಥಿಕ ಸ್ಥಿತಿಗತಿಗಳು ಕೊಚ್ಚಿ ಹೋಗುತ್ತಿದ್ದರೂ ಮಾತಿನಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಉತ್ತರಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೌಕತ್ ಕತೀಬ್, ಮುಖಂಡರಾದ ಯೂನೂಸ್ ರುಕ್ನುದ್ದೀನ್, ಅಬ್ದುಲ್ ಜಬ್ಬಾರ್ ಅಸದಿ, ನಾಸಿರ್ ಮುಂತಾದವರು ಉಪಸ್ಥಿತರಿದ್ದರು.