ಪಿಎಂಸಿ ಬ್ಯಾಂಕ್‌ಗೆ 11 ವರ್ಷಗಳಲ್ಲಿ 4 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ

Update: 2019-09-30 18:22 GMT

ಮುಂಬೈ, ಸೆ. 30: ಪಂಜಾಬ್ ಹಾಗೂ ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್ ಪ್ರಕರಣದಲ್ಲಿ ಎಚ್‌ಡಿಐಎಲ್‌ನ ಪ್ರವರ್ತಕರು ಹಾಗೂ ಬ್ಯಾಂಕ್‌ನ ಮಾಜಿ ಆಡಳಿತ ಮಂಡಳಿ ವಿರುದ್ಧ ಮುಂಬೈ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಈ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಆರ್‌ಬಿಐ ನಿಯೋಜಿತ ಆಡಳಿತಗಾರ ಸಲ್ಲಿಸಿದ ದೂರಿನ ಆಧಾರದಲ್ಲಿ ನಗರ ಪೊಲೀಸ್‌ನ ಆರ್ಥಿಕ ಅಪರಾಧ ದಳ ಅಧಿಕಾರಿಗಳ ವಿರುದ್ಧ ವಂಚನೆ ಹಾಗೂ ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಿದೆ.

2008ರಿಂದ ಬ್ಯಾಂಕ್‌ಗೆ 4,355.46 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News