ಅ.3ರಂದು ಬ್ಯಾರಿ ಭಾಷಾ ದಿನಾಚರಣೆ

Update: 2019-10-01 11:02 GMT

ಮಂಗಳೂರು, ಅ.1: ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ನಗರದ ಹೊಟೇಲ್ ಶ್ರೀನಿವಾಸ್ ಸಭಾಂಗಣದಲ್ಲಿ ಅ.3ರಂದು ಬೆಳಗ್ಗೆ 9ಕ್ಕೆ ಬ್ಯಾರಿ ಭಾಷಾ ದಿನಾಚರಣೆಯು ಜರುಗಲಿದೆ.

2013ರಿಂದ ಬ್ಯಾರಿ ಭಾಷಾ ದಿನಾಚರಣೆಯನ್ನು ಆರಂಭಿಸಲಾಗಿದ್ದು, ಈ ಬಾರಿಯ ಕಾರ್ಯಕ್ರಮವನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಬ್ಯಾರಿ ಸಾಧಕರಿಗೆ ಗೌರವಾರ್ಪಣೆ ನಡೆಸಿಕೊಡಲಿದ್ದರೆ.

ಅತಿಥಿಗಳಾಗಿ ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್ ಕೌನ್ಸಿಲ್‌ನ ದ.ಕ. ಜಿಲ್ಲಾಧ್ಯಕ್ಷ ಅಹ್ಮದ್ ಮೊಹಿದೀನ್, ಟಿಆರ್‌ಎಫ್ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಗೌರವ ಸಲಹೆಗಾರ ಹೈದರ್ ಪರ್ತಿಪ್ಪಾಡಿ, ಸ್ಥಾಪಕಾಧ್ಯಕ್ಷ ಜೆ. ಹುಸೈನ್, ನಿವೃತ್ತ ಕಂದಾಯ ಅಧಿಕಾರಿ ಮೂಸಬ್ಬ ಬ್ಯಾರಿ ಭಾಗವಹಿಸಲಿದ್ದಾರೆ.

ಸಭಿಕರಿಗೆ ಆಯೋಜಿಸಲಾದ ಬ್ಯಾರಿ ಕ್ವಿಝ್ ಸ್ಪರ್ಧೆಯನ್ನು ಬ್ಯಾರಿ ಪರಿಷತ್ ಉಪಾಧ್ಯಕ್ಷ ಖಾಲಿದ್ ಉಜಿರೆ ನಡೆಸಿಕೊಡಲಿದ್ದು, ಮುಹಮ್ಮದ್ ಶರೀಫ್ ನಿರ್ಮುಂಜೆ ಬ್ಯಾರಿ ಹಾಡುಗಳನ್ನು ಹಾಡಲಿದ್ದಾರೆ. ಬ್ಯಾರಿ ಪರಿಷತ್‌ನ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News