ಪಾಕ್ ವಿರುದ್ಧ ಭಾರತ ಚುನಾವಣೆ ಹೇಳಿಕೆ: ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು

Update: 2019-10-01 14:28 GMT
ಗೋಪಾಲ್ ಭಾರ್ಗವ

ಭೋಪಾಲ,ಅ.1: ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವೆಂದು ಹೇಳಿಕೆ ನೀಡಿದ ಬಿಜೆಪಿ ನಾಯಕನ ವಿರುದ್ಧ ಚುನಾವಣಾ ಆಯೋಗದ ಆದೇಶದ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

ಮಧ್ಯಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ಗೋಪಾಲ್ ಭಾರ್ಗವ ಅಕ್ಟೋಬರ್ 21ರಂದು ಜಬುವಾ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಕೇವಲ ಆಡಳಿತ ಪಕ್ಷ ಕಾಂಗ್ರೆಸ್ ವಿರೋಧಪಕ್ಷ ಬಿಜೆಪಿ ನಡುವಿನ ಹೋರಾಟವಲ್ಲ, ಬದಲಿಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವಾಗಿದೆ ಎಂದು ಹೇಳಿಕೆ ನೀಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿಯ ಭಾನು ಭುರಿಯ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಹಾಗಾಗಿ ಅವರಿಗೆ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿರುವ ಭಾರ್ಗವ, ಕಾಂಗ್ರೆಸ್ ಅಭ್ಯರ್ಥಿಯನ್ನು ಪಾಕಿಸ್ತಾನದ ಪ್ರತಿನಿಧಿ ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ನಾಯಕನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ, ಈ ಹೇಳಿಕೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎನ್ನುವುದು ಸ್ಪಷ್ಟವಾದ ನಂತರ ಭಾರ್ಗವ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾ ರಿಟರ್ನಿಂಗ್ ಅಧಿಕಾರಿ ಮತ್ತು ಕಲೆಕ್ಟರ್‌ಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕನ ವಿರುದ್ಧ ಸೋಮವಾರ ರಾತ್ರಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News