×
Ad

ಮೂಡುಬಿದಿರೆ: ವರ್ಧಮಾನ ಪ್ರಶಸ್ತಿ ಪ್ರದಾನ

Update: 2019-10-01 22:59 IST

ಮೂಡುಬಿದಿರೆ: ಇಲ್ಲಿನ ಸಮಾಜಮಂದಿರದಲ್ಲಿ ನಡೆಯುತ್ತಿರುವ 74ನೇ ದಸರಾ ಸಾಹಿತ್ಯ, ಸಾಂಸ್ಕøತಿಕ ಸಮ್ಮೇಳನದಲ್ಲಿ ಮಂಗಳವಾರ ವರ್ಧಮಾನ ಪ್ರಶಸ್ತಿ ಪೀಠದಿಂದ ಸಾಹಿತಿ ಡಾ.ಬಸವರಾಜ ಕಲ್ಗುಡಿ ಬೆಂಗಳೂರು ಅವರಿಗೆ  2018ನೇ ಸಾಲಿನ ವರ್ಧಮಾನ ಸಾಹಿತ್ಯ ಪ್ರಶಸ್ತಿ ಹಾಗೂ ಡಾ.ದೀಪಾ ಫಡ್ಕೆ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಶ್ರೀಜೈನಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ವರ್ಧಮಾನ ಪ್ರಶಸ್ತಿ ಪೀಠದ ಕಾರ್ಯಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆವಹಿಸಿದರು.

ಪೀಠದ ಪ್ರಧಾನ ಕಾರ್ಯದರ್ಶಿ ಡಾ.ನಾ ಮೊಗಸಾಲೆ ಪ್ರಾಸ್ತಾವನೆಗೈದು, ಸ್ವಾಗತಿಸಿದರು.ಸಹನಿರ್ದೇಶಕ ನಿರಂಜನ ಕುಮಾರ್ ಶೆಟ್ಟಿ ಪ್ರಶಸ್ತಿ ಪತ್ರ ವಾಚಿಸಿದರು. ಮುನಿರಾಜ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು. ಸಹನಿರ್ದೇಶಕ ನೇಮಿರಾಜ ಶೆಟ್ಟಿ ವಂದಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News