ಮೋದಿ ಟ್ವೀಟ್‌ಗೆ ವಿಶೇಷ ಅರ್ಥ ಬೇಡ: ಸಚಿವ ಜಗದೀಶ್ ಶೆಟ್ಟರ್

Update: 2019-10-01 18:12 GMT

ಬೆಳಗಾವಿ, ಅ.1: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿಲ್ಲ ಎನ್ನುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ. ಯಾವುದೇ ತೊಂದರೆಯಾಗದಂತೆ ಸರಕಾರ ನೋಡಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿಯೇ ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಕುರಿತು ಹೇಳಿಕೆ ನೀಡಿದ್ದಾರೆ. ಆ ಕುರಿತು ಹೇಳುವುದಕ್ಕೆ ಶಾಸಕ ಉಮೇಶ ಕತ್ತಿ ಅಧಿಕೃತ ವ್ಯಕ್ತಿಯಲ್ಲ ಎಂದ ಅವರು, ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News