ಮೊದಲ ಟೆಸ್ಟ್: ಆರಂಭಿಕ ಆಟಗಾರನಾಗಿ ರೋಹಿತ್ ಶತಕ

Update: 2019-10-02 08:26 GMT

ವಿಶಾಖಪಟ್ಟಣ, ಅ.2: ಇದೇ ಮೊದಲ ಬಾರಿ ಟೆಸ್ಟ್ ಕ್ರಿಕೆಟ್‌ನಲ್ಲಿ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಶತಕ ದಾಖಲಿಸಿ ಗಮನ ಸೆಳೆದರು.

ದಕ್ಷಿಣ ಆಫ್ರಿಕಾ ವಿರುದ್ಧ ಬುಧವಾರ ಆರಂಭವಾದ ಮೊದಲ ಟೆಸ್ಟ್‌ನ ಮೊದಲ ದಿನದಾಟದಲ್ಲಿ ರೋಹಿತ್ 160 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಾಯದಿಂದ ಶತಕ ಪೂರೈಸಿದರು. ಮಾಯಾಂಕ್ ಅಗರ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ ರೋಹಿತ್ ತಾನಾಡಿದ 28ನೇ ಟೆಸ್ಟ್ ಪಂದ್ಯದಲ್ಲಿ ನಾಲ್ಕನೇ ಶತಕ ಸಿಡಿಸಿದರು.

ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ಶಿಖರ್ ಧವನ್ ಕಳಪೆ ಫಾರ್ಮ್‌ನಿಂದಾಗಿ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ರೋಹಿತ್ ಟೆಸ್ಟ್‌ನಲ್ಲಿ ಮೊದಲ ಬಾರಿ ಇನಿಂಗ್ಸ್ ಆರಂಭಿಸುವ ಅವಕಾಶ ಪಡೆದಿದ್ದರು. ಈ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News