ಬಂಟಕಲ್ಲು: ಹಿರಿಯ ನಾಗರಿಕರ ಸಮಾವೇಶ -ಆರೋಗ್ಯ ತಪಾಸಣೆ

Update: 2019-10-02 14:09 GMT

 ಶಿರ್ವ, ಅ.2: ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಎನ್‌ಸಿಡಿ ಘಟಕ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ, ಬಂಟಕಲ್ಲು ಬಿ.ಸಿ.ರೋಡ್ ಲಯನ್ಸ್ ಕ್ಲಬ್ ಮತ್ತು ರಾಜಾಪುರ ಸಾರಸ್ವತ ಯುವವೃಂದದ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಹಿರಿಯ ನಾಗರಿಕರ ಸಮಾವೇಶ ಮತ್ತು ಆರೋಗ್ಯ ತಪಾಸಣಾ ಶಿಬಿರ ಮಂಗಳವಾರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್ ಶಿರ್ವ ಮಾತನಾಡಿ, ಹಿರಿಯ ನಾಗರಿಕರ ರಕ್ಷಣೆ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ನೂತನ ಯೋಜನೆ ಗಳನ್ನು ಜಾರಿಗೊಳಿಸಿದ್ದು, ಅದನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಲಾಖೆಯ ಜೊತೆಗೆ ಸಾಮಾಜಿಕ ಸೇವಾ ಸಂಸ್ಥೆಗಳು ಸಕ್ರೀಯವಾಗಿ ಕೈಜೋಡಿಸ ಬೇಕು ಎಂದರು.

ಕಾರ್ಯಕ್ರಮವನ್ನು ಹಿರಿಯ ನಾಗರಿಕರಾದ ಸಡಂಬೈಲು ಸಾವಿತ್ರಿ ನಾವೆಲ್ಕರ್ ಉದ್ಘಾಟಿಸಿದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್‌ಕುಮಾರ್ ಬೈಲೂರು, ದೇವಳದ ಆಡಳಿತ ಮ ಮೊಕ್ತೇಸರ ಗುರ್ನೆಬೆಟ್ಟು ಗಣಪತಿ ನಾಯಕ್ ಮಾತನಾಡಿದರು. ಈ ಸಂದರ್ಭ ದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಯಿತು.

ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಂಪದಬೈಲು ಜಯರಾಮ ಪ್ರಭು, ಯುವವೃಂದದ ಅಧ್ಯಕ್ಷ ವೀರೇಂದ್ರ ಪಾಟ್ಕರ್ ಕೋಡುಗುಡ್ಡೆ ಉಪಸ್ಥಿತರಿದ್ದರು. ಲಯನ್ಸ್ ಅಧ್ಯಕ್ಷ ಕೆ.ರಾಮರಾಯ ಪಾಟ್ಕರ್ ಸ್ವಾಗತಿಸಿದರು. ಪುನಾರು ರಘುನಾಥ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಕಾರ್ಯ ದರ್ಶಿ ವಾಲೆಟ್ ಕೆಸ್ತಲಿನೊ ವಂದಿಸಿದರು. ಬಳಿಕ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News