ಮೈಸೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Update: 2019-10-02 18:30 GMT

ಮೈಸೂರು,ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ವರ್ಷದ ಜಯಂತಿಯ ಅಂಗವಾಗಿ ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ 'ಸದ್ಭಾವನ ನಡಿಗೆ' ನಡೆಯಿತು. ಇದಕ್ಕೂ ಮೊದಲು ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ರೈಸ್ತ, ಮುಸಲ್ಮಾನ, ಹಿಂದೂ ಧರ್ಮದ ಧರ್ಮಗುರುಗಳು ಭಾಗವಹಿಸಿದ್ದರು. ಮಾಜಿ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ, ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನಾ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ವಾಸು, ಮಹಿಳಾ ಅಧ್ಯಕ್ಷೆ ರಾಧಾಮಣಿ, ವಕ್ತಾರರಾದ ಮಂಜುಳಾ ಮಾನಸ, ಲಕ್ಷ್ಮಣ್, ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಮತ್ತಿತರ ಕಾಂಗ್ರೆಸ್ ಪಕ್ಷದ ವಿವಿಧ ವಿಭಾಗದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News