ಎಸ್.ಮೂರ್ತಿ ಸೇರಿ ಮೂವರು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ

Update: 2019-10-03 12:13 GMT
ಎಸ್.ಮೂರ್ತಿ

ಬೆಂಗಳೂರು, ಅ.3: ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡಿರುವ ಎಸ್.ಮೂರ್ತಿ ಸೇರಿದಂತೆ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ವಿಧಾನಸಭೆಯಿಂದ ಅಮಾನತುಗೊಂಡಿರುವ ಕಾರ್ಯದರ್ಶಿ ಎಸ್.ಮೂರ್ತಿಯ ಸದಾಶಿವನಗರ, ಎಚ್‌ಎಂಟಿ ಕಾಲನಿಯಲ್ಲಿನ ಮನೆಗಳು, ಓಂ ಶಕ್ತಿ ಅಪಾರ್ಟ್‌ಮೆಂಟ್‌ನಲ್ಲಿರುವ 2 ಫ್ಲಾಟ್ ಹಾಗೂ ಕೊಡಗು ಜಿಲ್ಲೆಯ ಕೆ.ನಿಡುಗಣಿ ಗ್ರಾಮದಲ್ಲಿನ ಕಾಫಿ ತೋಟದಲ್ಲಿ ಎಸಿಬಿ ಅಧಿಕಾರಿಗಳು ತನಿಖೆ ನಡೆಸಿ, ಪರಿಶೀಲನೆ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಪಂಚಾಯತ್‌ರಾಜ್ ಕಾರ್ಯನಿರ್ವಾಹಕ ಅಭಿಯಂತರ ಕೆ.ಹನುಮಂತಪ್ಪ ನಿವಾಸ, ಕಚೇರಿ ಹಾಗೂ ಹೂವಿನ ಹಡಗಲಿಯ ಎಸ್‌ಕೆಆರ್‌ಎಚ್ ಸ್ಕೂಲ್, ನಾಗತಿ ಬಸಾಪುರದ ಸುಮಶ್ರೀ ಪತ್ತಿನ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್, ನಾಗತಿ ಬಸಾಪುರದಲ್ಲಿನ ಹಳೆ ಶಾಲೆ ಹಾಗೂ ಹೂವಿನ ಹಡಗಲಿಯ ಹಳೆ ಮನೆ ಮೇಲೆ ಅಧಿಕಾರಿಗಳು ನಡೆಸಿದ್ದಾರೆ.

ಬೀದರ್ ಜಿಲ್ಲೆಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಕಿರಿಯ ಎಂಜಿನಿಯರ್ ವಿಜಯ ರೆಡ್ಡಿ ಮನೆ, ಕಚೇರಿ, ನಿರ್ನಾ ಗ್ರಾಮದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಫಾರ್ಮ್ ಹೌಸ್‌ನಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News