ಉಡುಪಿ: ರೆಡ್‌ಕ್ರಾಸ್ ವತಿಯಿಂದ ಗಾಂಧಿ ಜಯಂತಿ
Update: 2019-10-03 19:57 IST
ಉಡುಪಿ, ಅ.3: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನವನ್ನು ಬುಧವಾರ ಅಜ್ಜರಕಾಡಿನಲ್ಲಿರುವ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಆಚರಿಸಲಾಯಿತು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಆಡಳಿತ ಸಮಿತಿ ಸದಸ್ಯ ಬಸ್ರೂರು ರಾಜೀವ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಗೌರವ ಖಜಾಂಚಿ ಟಿ.ಚಂದ್ರಶೇಖರ್, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ ಮತ್ತು ಕೆ.ಜಯರಾಮ ಆಚಾರ್ಯ, ಯುವ ರೆಡ್‌ಕ್ರಾಸ್ ಜಿಲ್ಲಾ ಸಂಚಾಲಕರು ಉಪಸ್ಥಿತರಿದ್ದರು.