ಮಂಗಳೂರು: ನಿಷೇಧಿತ ಪ್ಲಾಸ್ಟಿಕ್ ವಶ; ದಂಡ ವಸೂಲಿ
Update: 2019-10-03 22:17 IST
ಮಂಗಳೂರು, ಅ.3: ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯಿಂದ ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿ, ನಿಷೇಧಿತ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆದು ದಂಡ ವಿಧಿಸಲಾಗಿದೆ.
ನಗರದ ಹಂಪನಕಟ್ಟೆ ಕೇಂದ್ರ ಮಾರುಕಟ್ಟೆ, ಅಳಕೆ, ಕುದ್ರೋಳಿ ದೇವಸ್ಥಾನ ಪ್ರದೇಶದ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು, ಸುಮಾರು 30 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ, 4,500 ರೂ. ದಂಡ ವಿಧಿಸಿದ್ದಾರೆ.
ಅಲ್ಲದೆ, ಪ್ಲಾಸ್ಟಿಕ್ ಬಳಸದಿರುವಂತೆ ವ್ಯಾಪಾರಸ್ಥರಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿ ಜಾಗೃತಿ ಮೂಡಿಸಿದರು. ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.