ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವತಿಯಿಂದ ಮಾದಕ ದ್ರವ್ಯ ವಿರುದ್ಧ ಜಾಗೃತಿ ಅಭಿಯಾನ

Update: 2019-10-03 17:51 GMT

ಉಳ್ಳಾಲ, ಅ.3: ಗಾಂಧಿ ಜನ್ಮ ದಿನಾಚರಣೆ ಪ್ರಯುಕ್ತ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವತಿಯಿಂದ ಮಾದಕ ದ್ರವ್ಯ ವಿರುದ್ಧ ಜಾಗೃತಿ ಅಭಿಯಾನವು ಉಳ್ಳಾಲ ಜಂಕ್ಷನ್ ನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಶಬೀರ್ ಪೇಟೆ ಸಜಿಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಅಶ್ಫಾಕ್ ಕೊಟೇಪುರ ಉದ್ಘಾಟಿಸಿದರು.

ಕೆ ಸಿ ರೋಡ್ ದರ್ಸ್ ವಿದ್ಯಾರ್ಥಿ ಸಿನಾನ್ ಸಾಗರ ರವರು 'ಗಾಂಧೀಜಿಯ ಕನಸಿನ ಭಾರತ' ಎಂಬ ವಿಷಯದ ಬಗ್ಗೆ ಮಾತನಾಡಿ, ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಮಾದಕ ದ್ರವ್ಯ ವಿರುದ್ಧ ಎಸ್ಸೆಸ್ಸೆಫ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಈ ಹೋರಾಟ ಮುಂದುವರಿಯಲಿದೆ, ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ವಿಸೃಂ ಕನ್ವೀನರ್ ಮುಸ್ತಫ ಮಾಸ್ಟರ್ ಮುಕ್ಕಚ್ಚೇರಿ ಹಾಗೂ ಸೆಕ್ಟರ್ ವ್ಯಾಪ್ತಿಯ ವಿವಿಧ ಶಾಖೆಗಳ ಕ್ಯೂ ಟೀಮ್ ಕಾರ್ಯಕರ್ತರು, ಸಂಘಟನಾ ನಾಯಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಮದನಿ ಕೊಟೇಪುರ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News