ನೆರೆ ಪರಿಹಾರ ನೀಡದ ಮೋದಿ ಸರಕಾರದ ವಿರುದ್ಧ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್‌ಗೆ ಶೋಕಾಸ್ ನೋಟಿಸ್

Update: 2019-10-04 13:21 GMT

ಬೆಂಗಳೂರು, ಅ.4: ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಕೇಂದ್ರ ಸರಕಾರದ ಕ್ರಮವನ್ನು ಬಹಿರಂಗವಾಗಿ ಟೀಕಿಸಿದ್ದ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಪಕ್ಷದ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.

ಶುಕ್ರವಾರ ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಠಾಕ್ ಅವರು ನೋಟಿಸ್ ಜಾರಿ ಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಪಕ್ಷದ ನಾಯಕರಾಗಿ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ, ಕರ್ನಾಟಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸರಕಾರ ಗಮನ ನೀಡುತ್ತಿಲ್ಲ ಎಂಬ ಆರೋಪವನ್ನು ಮಾಡಿ ಸರಕಾರ ಮೇಲೆ ಜನರಿಗೆ ಋಣಾತ್ಮಕ ಅಭಿಪ್ರಾಯ ಮೂಡುವಂತೆ ಮಾಡಿದ್ದೀರಿ. ಈ ಬಗ್ಗೆ ಪಕ್ಷದ ನಾಯಕರಾಗಿ 10 ದಿನಗಳ ಒಳಗಾಗಿ ವಿವರಣೆ ನೀಡಿ ಎಂದು ಸೂಚಿಸಲಾಗಿದೆ.

ಹೇಳಿದ್ದೇನು?: ಇಂದು ಮಾಜಿ ಸಚಿವ ಅನಂತಕುಮಾರ್ ಬದುಕಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಅನಂತಕುಮಾರ್ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಧ್ಯೆ ಸೇತುವೆಯಾಗಿದ್ದರು. ಆದರೆ, ಹಾಲಿ ಬಿಜೆಪಿ ಸಂಸದರಿಗೆ ಪ್ರಧಾನಿ ಭೇಟಿಗೆ ಸಮಯ ಕೇಳುವ ತಾಕತ್ತಿಲ್ಲ ಎಂದೆಲ್ಲಾ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News