ಮಂಗಳೂರು: ಏರ್‌ಪೋರ್ಟ್‌ನಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನ ವಶ
Update: 2019-10-04 21:05 IST
ಮಂಗಳೂರು, ಅ.4: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮೂವರು ಪ್ರಯಾಣಿಕರನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಸುಮಾರು 25 ಲಕ್ಷ ರೂ. ಮೌಲ್ಯದ ಚಿನ್ನವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಗುರುವಾರ ತಪಾಸಣೆ ವೇಳೆ ಪೇಸ್ಟ್ ರೂಪದಲ್ಲಿದ್ದ 493.76 ಗ್ರಾಂ ಚಿನ್ನವನ್ನು ಪ್ರಯಾಣಿಕನೋರ್ವನಿಂದ ವಶಕ್ಕೆ ಪಡೆಯಲಾಗಿದೆ. ಸೆ.30ರಂದು ಇಬ್ಬರು ಮಹಿಳಾ ಪ್ರಯಾಣಿಕರಿಂದ 143.480 ಗ್ರಾಂ ತೂಕದ ಕಚ್ಚಾ ರೂಪದ ಮೂರು ಚಿನ್ನದ ಸರಗಳು, 32.30 ಗ್ರಾಂ ತೂಕದ ಬ್ರಾಸ್ಲೆಟ್‌ನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎರಡೂ ಘಟನೆಗಳಲ್ಲಿ ವಶಕ್ಕೆ ಪಡೆದ ಚಿನ್ನದ ಮೌಲ್ಯ 24.96 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ವಿಮಾನ ನಿಲ್ದಾಣ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.