ಅ.6ರಂದು ಪ್ರತಿಭಾ ಪುರಸ್ಕಾರ -ವಿಶೇಷಾಂಕ ಬಿಡುಗಡೆ
Update: 2019-10-04 21:51 IST
ಉಡುಪಿ, ಅ. 4: ಮುಂಬೈ ಬಿಲ್ಲವರ ಅಸೋಸಿಯೇಶನ್ ವತಿಯಿಂದ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಅಕ್ಷಯ ಮಾಸಿಕ ಹುಟ್ಟುಹಬ್ಬ ವಿಶೇಷಾಂಕ ಬಿಡುಗಡೆ ಸಮಾರಂಭವನ್ನು ಅ.6ರಂದು ಬೆಳಗ್ಗೆ 9ಗಂಟೆಗೆ ಪಡುಬೆಳ್ಳೆ ಶ್ರೀನಾರಾಯಣಗುರು ವಿದ್ಯಾ ಸಂಕುಲದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಜಯ ಸಿ.ಸುವರ್ಣ ಉದ್ಘಾಟಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸನ್ಮಾನಿಸ ಲಾಗುವುದು ಎಂದು ಅಸೋಸಿಯೇಶನ್ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ.ಬಂಗೇರ, ಶಿವಾಜಿ ಸುವರ್ಣ, ಪ್ರಮಲ್ ಕುಮಾರ್, ಜ್ಯೋತಿ ಪ್ರಮಲ್ ಕುಮಾರ್ ಉಪಸ್ಥಿತರಿದ್ದರು.