×
Ad

ಕನ್ನಡ ಸಾರಸ್ವತ ಲೋಕದ ಚಿಲುಮೆ ರಾಷ್ಟ್ರಕವಿ ಕುವೆಂಪು:ಡಾ.ನರೇಂದ್ರ ರೈ ದೇರ್ಲ

Update: 2019-10-04 22:42 IST

ಮಂಗಳೂರು, ಅ.3: ಮೃದು ಸ್ವಭಾವದ, ಕಾಡಿನ ನೈಜ ಸೌಂದರ್ಯದ ಮಧ್ಯೆ ನೆಲೆಸಿ ಕವಿತೆಗಳನ್ನು ರಚಿಸಿ ಜನಮಾನಸವನ್ನು ಸೆಳೆದ ಕನ್ನಡದ ಮೇರು ಕವಿಯಾಗಿರುವ ರಾಷ್ಟ್ರಕವಿ ಕುವೆಂಪು ಕನ್ನಡ ಸಾರಸ್ವತ ಲೋಕದ ಚಿಲುಮೆಯಾಗಿದ್ದಾರೆ ಎಂದು ಪ್ರಾಧ್ಯಾಪಕ, ಪರಿಸರ ಬರಹಗಾರ ಡಾ. ನರೇಂದ್ರ ರೈ ದೇರ್ಲ ಹೇಳಿದರು.

ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ಶುಕ್ರವಾರ ನಡೆದ ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ-ವಿಶೇಷೋಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಕೃತಿ ರಮಣೀಯತೆಗೆ ಹೆಸರಾದ ಮಲೆನಾಡಿನ ಹಚ್ಚ ಹಸಿರಿನ ಪ್ರಕೃತಿ ಮಾತೆಯ ಮಡಿಲಿನಲ್ಲಿ ಬೆಳದು ಕತೆ, ಕವಿತೆ, ಕಾದಂಬರಿಗಳ ಮೂಲಕ ಪರಿಸರದ ನೈಜ ಚಿತ್ರಣವನ್ನು ನೀಡಿದ ಕುವೆಂಪು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ ಎಂದು ಡಾ. ನರೇಂದ್ರ ರೈ ದೇರ್ಲ ನುಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಶೇಖರ ಹೆಬ್ಬಾರ್ ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನೆ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪ್ರಕಾಶಚಂದ್ರ ಶಿಶಿಲ ಸ್ವಾಗತಿಸಿದರು. ಪ್ರಾಧ್ಯಾಪಕ ಪ್ರೊ, ರವಿಕುಮಾರ್ ಎಂಪಿ ಗೀತೆ ಹಾಡಿದರು. ಪ್ರಾಧ್ಯಾಪಕಿ ಡಾ.ನಾಗವೇಣಿ ಮಂಚಿ ವಂದಿಸಿದರು. ವಿದ್ಯಾರ್ಥಿನಿ ತೇಜಸ್ವಿನಿ ಕೆ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News