ಬಿಜೆಪಿ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
Update: 2019-10-04 23:00 IST
ಬೆಂಗಳೂರು, ಅ.4: ಬಿಜೆಪಿ ಮುಖಂಡನನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಿವಿ ರಾಮನ್ ನಗರದ ಸ್ಥಳೀಯ ಬಿಜೆಪಿ ಮುಖಂಡ ಲೋಕೇಶ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಲೋಕೇಶ್ ಅವರು ಗುರುವಾರ ರಾತ್ರಿ ಇಲ್ಲಿನ ಲಕ್ಷ್ಮೀಪುರ ನಿವಾಸದ ಬಳಿ ಕಾರಿನಿಂದ ಕೆಳಗಿಳಿಯುತ್ತಿದ್ದಾಗ ದಿಢೀರ್ ಹಿಂದಿನಿಂದ ದಾಳಿ ಮಾಡಿರುವ ಮುಸುಕು ಧಾರಿಗಳು ಬೆನ್ನಿಗೆ ಚಾಕುನಿಂದ ಇರಿದಿದ್ದಾರೆ. ರಕ್ಷಣೆಗಾಗಿ ಧಾವಿಸಿದ ಹರೀಶ್ ಎಂಬುವರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ಬಳಿಕ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.