ರಾಜ್ಯದ ಜನರ ನೋವಿಗೆ ಸ್ಪಂದಿಸಿದ ಮೋದಿ, ಶಾ ರಿಗೆ ಅಭಿನಂದನೆಗಳು: ನಳಿನ್ ಕುಮಾರ್ ಕಟೀಲ್

Update: 2019-10-04 17:55 GMT

ಬೆಂಗಳೂರು, ಅ.4: ರಾಜ್ಯದ ನೆರೆಪೀಡಿತ ಪ್ರದೇಶಗಳ ಸಂತ್ರಸ್ತರ ನೆರವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದ ಕೇಂದ್ರ ಸರ್ಕಾರವು ಮಧ್ಯಂತರ ಪರಿಹಾರವಾಗಿ 1200 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಿದೆ. ರಾಜ್ಯದ ಜನರ ನೋವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇದರ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ಈಗಾಗಲೇ ಮಧ್ಯಂತರ ಪರಿಹಾರವಾಗಿ 1750 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಪರಿಹಾರದ ಹಣ ಬಿಡುಗಡೆಗಾಗಿ ಶ್ರಮಿಸಿದ ರಾಜ್ಯ ಬಿಜೆಪಿ ಘಟಕ, ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News