ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಆಗ್ರಹಿಸಿ ರೈತ ಸಂಘ ಧರಣಿ

Update: 2019-10-04 18:50 GMT

ದಾವಣಗೆರೆ, ಅ.4: ರೈಲ್ವೆ ನೇಮಕಾತಿಯಲ್ಲಿ ಸ್ಥಳೀಯ ಕನ್ನಡ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ ಮಾತನಾಡಿ, ಕೇಂದ್ರಿಕೃತ ಪರೀಕ್ಷ ವ್ಯವಸ್ಥೆಯಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಈ ವ್ಯವಸ್ಥೆಯನ್ನು ರದ್ದು ಮಾಡಿ  ಈ ಮೊದಲೇ ಇದ್ದಂತೆ ಹುಬ್ಬಳ್ಳಿಯ ರೈಲ್ವೆ ನೇಮಕಾತಿ ಕೋಶ ಸ್ಥಾಪನೆ ಮಾಡಬೇಕು. ನಮ್ಮ ರಾಜ್ಯದಲ್ಲಿ ಸ್ಥಳೀಯರಿಗೆ ಶೇ 80 ರಷ್ಟು ಮೀಸಲಾತಿ ನೀಡಬೇಕು. ಕೇಂದ್ರಿಕೃತ ವ್ಯವಸ್ಥೆಯಿಂದ ಕನ್ನಡರಿಗರಿಗೆ ದೊಡ್ಡ ಮಟ್ಟದಲ್ಲಿ ಅನ್ಯಾಯವಾಗಿದೆ. ಅದ್ದರಿಂದ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸರಕಾರಗಳು ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಬೇಕಾಗುತ್ತೆದೆ ಎಂದು ಎಚ್ಚರಿಸಿದರು. 

ಗುಮ್ಮನೂರು ಬಸವರಾಜ್, ಕಾಡಜ್ಜಿ ಪ್ರಕಾಶ್, ಬಸಣ್ಣ, ಕುಕ್ಕವಾಡ ಪರಮೇಶ್, ಆಲೂರು ಪರುಶರಾಮ್, ಹುಚ್ಚವನಹಳ್ಳಿ ಪ್ರಕಾಶ್, ಹುಚ್ಚೆಂಗಪ್ಪ, ಪಾಮೇನಹಳ್ಳಿ ಗೌಡ್ರ ಶೇಖರಪ್ಪ, ಕರೇಲಕ್ಕೇನಹಳ್ಳಿ, ಲೋಕೇಶ ನಾಯ್ಕ್, ಸೇರಿದಂತೆ ಇತರರು ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News