ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿ; 12 ಮಂದಿಗೆ ಗಂಭೀರ ಗಾಯ

Update: 2019-10-05 08:00 GMT

ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾದ ಪರಿಣಾಮ 12 ಮಂದಿ ಕೂಲಿ ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮತ್ತೀಪುರ ಕ್ರಾಸ್ ಬಳಿ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಇಕ್ಕಡಹಳ್ಳಿ ಗ್ರಾಮದ ನಿವಾಸಿಗಳಾದ ಅಕ್ಕಮ್ಮ, ಸುಮಿತ್ರ, ರತ್ನಮ್ಮ, ಯಶೋಧ, ರಾಜಮ್ಮ, ವೆಂಕಟಮ್ಮ ಹಾಗು ಇತರರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಬಗ್ಗೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News