ಸಂಸದ ಪ್ರತಾಪ್ ಸಿಂಹಗೆ ಕಪ್ಪು ಬಾವುಟ ತೋರಿಸಿ ಧಿಕ್ಕಾರ ಕೂಗಿದ ದಲಿತರು

Update: 2019-10-05 12:46 GMT

ಮೈಸೂರು, ಅ.5: ಶಾಸಕ ಅರವಿಂದ ಲಿಂಬಾವಳಿ ಜೊತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಂಸದ ಪ್ರತಾಪ್ ಸಿಂಹಗೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಧಿಕ್ಕಾರ ಕೂಗಿದ ಘಟನೆ ನಡೆಯಿತು.

ಇಂದು ಚಾಮುಂಡಿ ಬೆಟ್ಟದಲ್ಲಿ “ಮೂಲನಿವಾಸಿಗಳ ಐಕ್ಯತೆಗಾಗಿ ಪ್ರತಿಭಟನಾ ಸಭೆ” ಆಯೋಜಿಸಲಾಗಿತ್ತು. ಇದೇ ವೇಳೆ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್ ನೇತೃತ್ವದಲ್ಲಿ ಕೆಲವರು ಪೊಲೀಸ್ ಸರ್ಪಗಾವಲು ಭೇದಿಸಿ ಚಾಮುಂಡಿ ಬೆಟ್ಟಕ್ಕೆ ತೆರಳಿ ದಾಸೋಹ ಭವನದ ಬಳಿ ಹೋಗಿ ನಿಂತಿದ್ದ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ತನ್ನ ಕಾರಿನಲ್ಲಿ ಶಾಸಕ ಅರವಿಂದ ಲಿಂಬಾಳಿಯವರ ಜೊತೆ ಆಗಮಿಸಿದರು. ಇದನ್ನು ಕಂಡ ಚುಂಚನಹಳ್ಳಿ ಮಲ್ಲೇಶ್, ಮಲ್ಲಹಳ್ಳಿ ನಾರಾಯಣ್, ನಗರ್ಲೆವಿಜಯಕುಮಾರ್ ಸೇರಿದಂತೆ ಹಲವರು ಕಪ್ಪು ಬಾವುಟ ತೋರಿಸಿ ಧಿಕ್ಕಾರ ಕೂಗಿದರು.

ಪೊಲೀಸ್ ಬಂದೋಬಸ್ತ್ ಇದ್ದರೂ ಸೆಲ್ಫಿ ತೆಗೆದುಕೊಳ್ಳುವ ನೆಪ ಹೇಳಿ ಮಹಿಷ ಪ್ರತಿಮೆ ಬಳಿ ಆಗಮಿಸಿದ ಕಾರ್ಯಕರ್ತರು ಮಹಿಷ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಹಿಷ ಮಹರಾಜ್ ಕೀ ಜೈ ಎಂಬ ಘೋಷಣೆಗಳನ್ನು ಕೂಗಿದರು. ನಂತರ ಪೊಲೀಸರು ಇವರನ್ನು ಬಂಧಿಸಿ ಕರೆದೊಯ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News