ತೀವ್ರ ಹೊಟ್ಟೆನೋವು: ಚಿದಂಬರಂ ಏಮ್ಸ್ ಆಸ್ಪತ್ರೆಗೆ

Update: 2019-10-05 14:10 GMT

ಹೊಸದಿಲ್ಲಿ, ಅ.5: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಪಿ.ಚಿದಂಬರಂರನ್ನು ಹೊಟ್ಟೆನೋವಿನಿಂದ ಬಳಲುತ್ತಿರುವ ಕಾರಣ ಸದ್ಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸೆಪ್ಟಂಬರ್ 5ರಿಂದ ಚಿದಂಬರಂ ತಿಹಾರ್ ಜೈಲಿನಲ್ಲಿದ್ದಾರೆ. ಆರೋಗ್ಯ ತಪಾಸಣೆಗಾಗಿ ಚಿದಂಬರಂ ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಮತ್ತು ಮನೆಯಿಂದ ತರಿಸಿದ ಊಟ ನೀಡಬೇಕು ಎಂದು ಕೋರ್ಟ್ ಹೇಳಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News