ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Update: 2019-10-05 21:45 IST
ಉಡುಪಿ, ಅ.5: ಜಿಲ್ಲಾಡಳಿತ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಮತ್ತು ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ, ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಪ್ರಯುಕ್ತ, ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವು ಅ.9ರ ಬೆಳಗ್ಗೆ 10 ಕ್ಕೆ ಚಿಟ್ಪಾಡಿ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಉದ್ಘಾಟಿಸಲಿದ್ದು, ಉಡುಪಿ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ. ವಲೇರಿಯನ್ ಮೆಂಡೋನ್ಸಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.