ಅ. 6ರಂದು ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆ
Update: 2019-10-05 22:41 IST
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅ. 6ರಂದು ಸಂಜೆ 5ಗಂಟೆಗೆ ನಡೆಯಲಿದೆ.
ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.