×
Ad

ಮಲೆಮಹದೇಶ್ವರ ಬೆಟ್ಟದಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

Update: 2019-10-05 22:52 IST

ಹನೂರು, ಅ.5: ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾಧಿಕಾರಿ ಬಿಬಿ ಕಾವೇರಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಬಳಿಕ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಕಾವೇರಿ, ಆಯುಧಪೂಜೆ, ವಿಜಯದಶಮಿ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಾದಪ್ಪ ಸನ್ನಿಧಿಗೆ ಭೇಟಿ ನೀಡಲಿರುವ ಹಿನ್ನೆಲೆ ಕೈಗೊಳ್ಳಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಗೂ ಮುನ್ನ ಪ್ರಾಧಿಕಾರದ ವತಿಯಿಂದ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಖುದ್ದು ಬೇಟಿ ನೀಡಿ ಕೆಲ ಕಾಲ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಶೀಲನೆ ನೆಡೆಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಆನಂದ್ ಕುಮಾರ್, ತಹಶೀಲ್ದಾರ್ ನಾಗರಾಜು, ಪೋಲಿಸ್ ಇನ್ಸ್ ಪೆಕ್ಟರ್ ನಾಗರಾಜು, ಕಾರ್ಯಪಾಲಕ ಅಭಿಯಂತರರಾದ ತನುಜ್ ಸೇರಿದಂತೆ ವಿವಿಧ ಅಧಿಕಾರಿಗಳಯ ಹಾಜರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News