ಸಂಚಾರ ನಿಯಮ ಉಲ್ಲಂಘಿಸಿದ ಬಿಬಿಎಂಪಿ ನೂತನ ಮೇಯರ್

Update: 2019-10-06 16:21 GMT

ಬೆಂಗಳೂರು, ಅ.6. ನಗರ ಪ್ರದಕ್ಷಿಣೆ ನಡೆಸುವ ಭರದಲ್ಲಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸಂಚಾರಿ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.

ರವಿವಾರ ಸ್ಕೂಟರ್ ಚಾಲನೆ ಮಾಡುವ ಮೂಲಕ, ನಗರ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ್ದಾರೆ. ಆದರೆ, ಚಾಲನೆ ಮಾಡಿದ ಸ್ಕೂಟರ್‌ನಲ್ಲಿ ಹಿನ್ನೋಟದ ಕನ್ನಡಿ ಅಳವಡಿಕೆ ಮಾಡಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.

ಕೇಂದ್ರ ಸಾರಿಗೆ ಇಲಾಖೆಯ ಹೊಸ ನಿಯಮದ ಪ್ರಕಾರ ವಾಹನ ಚಾಲನೆಯ ವೇಳೆ ರಿಯರ್ ವ್ಯೀವ್ ಮಿರ್ರರ್(ಹಿನ್ನೊಟದ ಕನ್ನಡಿ) ಅನ್ನು ಕಡ್ಡಾಯವಾಗಿ ಅಳವಡಿಕೆ ಮಾಡಬೇಕು ಎನ್ನುವ ನಿಯಮ ಇದೆ. ಅಷ್ಟೇ ಅಲ್ಲದೆ, ನಿಯಮ ಉಲ್ಲಂಘನೆ ಭಾರೀ ಮೊತ್ತದ ದಂಡ ವಿಧಿಸಬಹುದಾಗಿದೆ ಎಂದು ಹೇಳಲಾಗುತ್ತಿದೆ.

ಸಾಮಾನ್ಯ ವಾಹನ ಸವಾರರಿಗೆ ಭಾರೀ ಮೊತ್ತದ ದಂಡ ಹಾಕುವ ಸಂಚಾರಿ ಪೊಲೀಸರು, ತಮ್ಮ ಸ್ಕೂಟರ್‌ನಲ್ಲಿ ಮಿರ್ರರ್ ಇರಬೇಕು ಎನ್ನುವ ಸಾಮಾನ್ಯ ತಿಳಿವಳಿಕೆಯ ಕೊರತೆಯುಳ್ಳ ಮೇಯರ್ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News