ಅ.15ರ ವರೆಗೆ ಮತದಾರರ ಪಟ್ಟಿ ಪರಿಶೀಲನೆ

Update: 2019-10-06 16:23 GMT

ಬೆಳಗಾವಿ, ಅ.5: ಚುನಾವಣಾ ಆಯೋಗ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಮತದಾರ ಪಟ್ಟಿ ಪರಿಶೀಲನಾ ಕಾರ್ಯಕ್ರಮವನ್ನು ಸೆ.1ರಂದು ಪ್ರಾರಂಭಿಸಲಾಗಿದ್ದು, ಅ.15ರ ವರೆಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ಜಿಲ್ಲೆಯ ಎಲ್ಲ ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸರಿಯಾಗಿ ಇರುವ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು ಹಾಗೂ ಯಾವುದಾದರೂ ಲೋಪದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ಎಲ್ಲಾ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ ವೆಬ್‌ಸೈಟ್ ceokarnataka.kar.nic.in ಹಾಗೂ NVSP Portal ನಲ್ಲಿ ಲಭ್ಯವಿರುತ್ತದೆ.

ಮತದಾರರು ತಮ್ಮ ಮೊಬೈಲ್‌ದಲ್ಲಿ https://apps.mgov.gov.in/descp.do?appid=1466 ಈ ಲಿಂಕ್‌ನ್ನು ಕ್ಲಿಕ್ ಮಾಡಿ ತಮ್ಮ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕರೆ ನಿಯಂತ್ರಣ ಕೊಠಡಿಗೆ ಟೋಲ್ ಪ್ರೀ ನಂ 1950ಕ್ಕೆ ಕಲಚೇತನ ಮತದಾರರು ಕರೆ ಮಾಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ಇರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ.

ಬೆಳಗಾವಿ ಒನ್ ಹಾಗೂ ಜಿಲ್ಲೆಯ ಅರ್ಹ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿಯೂ ಕೂಡ ತಮ್ಮ ಹೆಸರುಗಳನ್ನು ಪಾಸ್ ಪೋರ್ಟ್, ವಾಹನ ಚಾಲನಾ ಪತ್ರ, ಆಧಾರ ಕಾರ್ಡ, ರೇಷನ್ ಕಾರ್ಡ, ಸರ್ಕಾರಿ ಕಚೇರಿ ಭಾವಚಿತ್ರವುಳ್ಳ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್, ರೈತ ಗುರುತಿನ ಚೀಟಿ, ಇತರೆ ಮೂಲ ದಾಖಲಾತಿಗಳನ್ನು ನೀಡಿ ಪರಿಶೀಲಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News