ಪ್ರಾಂಶುಪಾಲರ ಹುದ್ದೆ ಭರ್ತಿ ಮಾಡಿ: ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ
Update: 2019-10-06 22:01 IST
ಬೆಂಗಳೂರು, ಅ.6: ರಾಜ್ಯದಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 600ಕ್ಕಿಂತ ಅಧಿಕ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇದ್ದು, ಪದೋನ್ನತಿ ಮೂಲಕ ಅವುಗಳನ್ನು ಭರ್ತಿ ಮಾಡಬೇಕೆಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಒತ್ತಾಯಿಸಿದ್ದಾರೆ.
ಹೈ-ಕರ್ನಾಟಕ(ಕಲ್ಯಾಣ ಕರ್ನಾಟಕ) ಭಾಗದ ಪ್ರಾಂಶುಪಾಲರಿಗೆ ಆಗುವ ಅನ್ಯಾಯ ನಿವಾರಿಸಬೇಕು ಎಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಮನವಿ ಮಾಡಿದ್ದೇವೆ ಎಂದರು.
ವರ್ಗಾವಣೆ ಕಾಯ್ದೆ ಪ್ರಕಾರವೇ ವರ್ಗಾವಣೆ ಮಾಡಬೇಕು. ಉಪನ್ಯಾಸಕರ ಜ್ಯೇಷ್ಟತಾ ಪಟ್ಟಿಯಲ್ಲಿರುವ ನ್ಯೂನತೆ ಸರಿಪಡಿಸಬೇಕು ಸೇರಿದಂತೆ ಪದವಿ ಪೂರ್ವ ಕಾಲೇಜು ಶಿಕ್ಷಕರು, ಪ್ರಾಂಶುಪಾಲರು ಎದುರಿಸುತ್ತಿರುವ ಸಮಸ್ಯೆಗಳನ್ನು ನ.1ರೊಳಗೆ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಬೇಕು. ಇಲ್ಲವಾದರೆ, ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.