ಲಂಚ ವಸೂಲಿ ಆರೋಪ: ಟ್ರಾಫಿಕ್ ಎಎಸ್‍ಐ, ಮುಖ್ಯಪೇದೆ ಅಮಾನತು

Update: 2019-10-06 16:57 GMT
ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ

ದಾವಣಗೆರೆ, ಅ.6: ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಬದಲು ಅವರಿಂದ 500-600 ರೂ. ವಸೂಲಿ ಮಾಡುತ್ತಿದ್ದಾರೆ ಎಂಬ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಎಎಸ್‍ಐ ಜಯಣ್ಣ, ಮುಖ್ಯ ಪೇದೆ ರವಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಆದೇಶಿಸಿದ್ದಾರೆ.

ಇತ್ತೀಚೆಗೆ ನಗರದ ಪಿಬಿ ರಸ್ತೆಯಲ್ಲಿ ಮುಖ್ಯ ಪೇದೆಯೊಬ್ಬರು ಜನರಿಗೆ ದಂಡ ವಿಧಿಸುವ ಬದಲು ಅವರಿಂದ ಹಣ ವಸೂಲಿ ಮಾಡುತ್ತಿದ್ದರೆನ್ನಲಾದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದು ಅಂತರ್ಜಾಲದಲ್ಲಿ ಹರಿಬಿಟ್ಟಿದ್ದರು. ಇದರ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಿಸ್ತು ಕ್ರಮ ಜರುಗಿಸಿದ್ದಾರೆ ಎನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News