ಮಂಗಳೂರು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
Update: 2019-10-06 22:45 IST
ಮಂಗಳೂರು, ಅ. 6: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲ್ ಸಮೀಪದ ದರ್ಬಾರ್ ಹಿಲ್ ಬಳಿ ನಡೆದಿದೆ.
ಶಾನ್ ಪತ್ರಾವೊ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಈತನ ಹೆತ್ತವರು ಶಾಪಿಂಗ್ ಗೆ ಹೋಗಿದ್ದ ವೇಳೆ ಶಾನ್ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.