ರಿತ್ವಿಕ್‌ಗೆ ‘ಕಾರಂತ ಹುಟ್ಟುಹಬ್ಬ ಸಾಧನಾ ಪ್ರಶಸ್ತಿ’
Update: 2019-10-07 17:35 IST
ಮಂಗಳೂರು, ಅ.7: ಕೆನಡಾದಲ್ಲಿ ಇತ್ತೀಚೆಗೆ ಜರುಗಿದ ಕಾಮನ್‌ವೆಲ್ತ್ ಇಂಟರ್‌ನ್ಯಾಷನಲ್ ಬೆಂಚ್- ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ 83 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗಳಿಸಿರುವ ನಗರದ ರಿತ್ವಿಕ್ ಅಲೆವುರಾಯ ಕೆ.ವಿ. ‘ಕಾರಂತ ಹುಟ್ಟುಹಬ್ಬ ಸಾಧನಾ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲಾ ಕಸಾಪ ಹಾಗೂ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಅ.10ರ ಸಂಜೆ ನಗರದ ಡಾನ್‌ಬಾಸ್ಕೋ ಹಾಲ್‌ನಲ್ಲಿ ಜರುಗಲಿರುವ ಡಾ. ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು ಎಂದು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ತಿಳಿಸಿದ್ದಾರೆ.