ಬೆಂಗಳೂರು: ಸಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಳಸಿದರೆ ಒಂದು ಸಾವಿರ ದಂಡ

Update: 2019-10-08 17:51 GMT

ಬೆಂಗಳೂರು, ಅ.8: ನಗರದ ಸಿಟಿ ರೈಲು ನಿಲ್ದಾಣದಲ್ಲಿ ಒಂದು ಬಾರಿ ಬಳಕೆ ಮಾಡಿ ಬಿಸಾಡುವ ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಯಾರಾದರೂ ಬಳಕೆ ಮಾಡುವುದು ಕಂಡು ಬಂದರೆ ಒಂದು ಸಾವಿರ ರೂ.ವರೆಗೆ ದಂಡ ವಿಧಿಸಲು ರೈಲ್ವೆ ಇಲಾಖೆ ಮುಂದಾಗಿದೆ.

ನೈಋತ್ಯ ರೈಲ್ವೆ ಇಲಾಖೆ ವ್ಯಾಪ್ತಿಯ ಎಲ್ಲ ರೈಲುಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಮೆಜೆಸ್ಟಿಕ್ ನಿಲ್ದಾಣ ಸೇರಿದಂತೆ ಆರು ಪ್ರಮುಖ ನಿಲ್ದಾಣಗಳಲ್ಲಿ ಹಿಂದಿನಿಂದಲೇ ಪ್ಲಾಸ್ಟಿಕ್ ಬಾಟಲ್ ಕ್ರಶಿಂಗ್ ಯಂತ್ರ ಅಳವಡಿಸಲಾಗಿದೆ. ಜನರು ಈ ಯಂತ್ರಗಳನ್ನು ಬಳಸಿ ನೀರಿನ ಬಾಟಲಿಗಳನ್ನು ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್ ನಿಯಂತ್ರಣಕ್ಕೆ ಹೆಚ್ಚು ನಿಲ್ದಾಣಗಳಲ್ಲಿ ಯಂತ್ರಗಳನ್ನು ಅಳವಡಿಸಲಾಗುವುದು.

ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಲ್ಲಿ ದೊರೆಯುವ ಅನುದಾನ ಬಳಸಿಕೊಂಡು ಯಂತ್ರ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರೈಲ್ವೆ ಇಲಾಖೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News