ಶಿವಮೊಗ್ಗ: ಕೆರೆಯಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು

Update: 2019-10-08 18:30 GMT

ಶಿವಮೊಗ್ಗ, ಅ. 8: ಎತ್ತುಗಳ ಮೈ ತೊಳೆಯಲು ಹೋದ ಬಾಲಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ಗ್ರಾಮದಲ್ಲಿ ನಡೆದಿದೆ. 

ಮಂಜುನಾಥ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ತತ್ತೂರು-ವಡ್ಡಿಗೆರೆಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಅಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆಯಿದ್ದ ಕಾರಣದಿಂದ ತನ್ನ ಸಹೋದರನೊಂದಿಗೆ ಎತ್ತುಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News