ಭಾರತದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ನಿಧಾನಗೊಳ್ಳಲಿವೆ: ಐಎಂಎಫ್ ಮುಖ್ಯಸ್ಥೆ

Update: 2019-10-09 06:09 GMT

ವಾಷಿಂಗ್ಟನ್, ಅ.9: ವಿಶ್ವದ ಆರ್ಥಿಕತೆಯ ನಿಧಾನಗತಿಯು ಭಾರತದಂತಹ ಅಭಿವೃದ್ಧಿಗೊಳ್ಳುತ್ತಿರುವ ದೇಶಗಳ ಮೇಲೆ  ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು  ಐಎಂಎಫ್‍ನ ಹೊಸ ಆಡಳಿತ ನಿರ್ದೇಶಕಿ ಕ್ರಿಸ್ತಾಲಿನಾ ಜಾರ್ಜೀವಾ ಹೇಳಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷ 2019-2020ರಲ್ಲಿ ಅಭಿವೃದ್ಧಿ ಪ್ರಮಾಣ ಈ ದಶಕದಲ್ಲಿಯೇ ಕನಿಷ್ಠ ಮಟ್ಟಕ್ಕೆ ಇಳಿಯಲಿದೆ.  ಜಗತ್ತಿನ ಶೇ 90ರಷ್ಟು ದೇಶಗಳು ನಿಧಾನಗತಿಯಲ್ಲಿ ಪ್ರಗತಿ ಹೊಂದಲಿದೆ ಎಂದು ಐಎಂಎಫ್ ಆಡಳಿತ ನಿರ್ದೇಶಕಿಯಾಗಿ ಅಧಿಕಾರ ವಹಿಸಿಕೊಂಡ ನಂತರದ ತಮ್ಮ ಪ್ರಥಮ ಭಾಷಣದಲ್ಲಿ ಅವರು ಹೇಳಿದರು.

"ಅಮೆರಿಕಾ ಹಾಗೂ ಜರ್ಮನಿಯಲ್ಲಿ ನಿರುದ್ಯೋಗ ಪ್ರಮಾಣ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಅಮೆರಿಕಾ, ಜಪಾನ್ ಮುಂತಾದ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮುಖ್ಯವಾಗಿ ಯುರೋಪಿಯನ್ ದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ನಿಧಾನಗತಿ ಪಡೆದಿವೆ, ಆದರೆ ಈ ನಿಧಾನಗತಿಯ ಪ್ರಮಾಣ  ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ" ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News