ಶಂಭೂರು ಡ್ಯಾಂನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2019-10-09 07:52 GMT

ಬಂಟ್ವಾಳ : ಶಂಭೂರು ಎಎಂಆರ್ ಡ್ಯಾಂನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಪತ್ತೆಯಾಗಿದೆ.

ಎಎಂಆರ್ ಡ್ಯಾಂನಲ್ಲಿ ಮೃತದೇಹ ಪತ್ತೆಯಾಗಿದ್ದು, ಡ್ಯಾಂನ ಮುಖ್ಯಸ್ಥರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುಮಾರು ಮೂರು ದಿನಗಳ ಹಿಂದೆ ಸಾವನ್ನಪ್ಪಿರಬಹುದು ಎಂದು ಗ್ರಾಮಾಂತರ ಎಸ್ಸೈ ಪ್ರಸನ್ನ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತರಿಗೆ  35-40 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಿದ್ದಾರೆ.

ಸಾಧಾರಣ ಮೈಕಟ್ಟು, ಎತ್ತರ 5.4 ಇಂಚು ಹೊಂದಿದ್ದು ಮೃತರ ಸೊಂಟದಲ್ಲಿ ಕಪ್ಪು ಬಣ್ಣದ ಉಡುದಾರ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮಂಗಳೂರು ವೆನ್ಲಾಕ್ ಶವಗಾರದಲ್ಲಿ ಇರಿಸಲಾಗಿದ್ದು, ಮೃತ ದೇಹದ ಗುರುತು ಪತ್ತೆಗೆ ಸಹಕರಿಸುವಂತೆ ಎಸ್ಸೈ ‌ಪ್ರಸನ್ನ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆಯೂ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News