ಮುಂಜಾನೆ ಪರಪ್ಪರ ಅಗ್ರಹಾರಕ್ಕೆ ಸಿಸಿಬಿ ದಾಳಿ: ಮಾರಕಾಸ್ತ್ರ, ಗಾಂಜಾ ವಶ

Update: 2019-10-09 12:31 GMT

ಬೆಂಗಳೂರು, ಅ.9: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು, ಮಾರಕಾಸ್ತ್ರ, ಗಾಂಜಾ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬುಧವಾರ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳ ತಂಡ, ಪರಿಶೀಲನೆ ನಡೆಸಿದಾಗ ಗಾಂಜಾ ಹಾಗೂ ಗಾಂಜಾ ಸೇವನೆ ಮಾಡುವ ಕೊಳವೆಗಳು, ಕಠಾರಿ, 37 ಚಾಕುಗಳು, ಮೊಬೈಲ್ ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ್ದು, ಇದಕ್ಕೆ ಅಕ್ರಮ ಚಟುವಟಿಕೆಗಳೇ ಕಾರಣವಾಗಿವೆ ಎನ್ನುವ ಆರೋಪ ಕೇಳಿಬಂದಿತ್ತು. ಜೈಲಿನಲ್ಲಿರುವ ಕೈದಿಗಳಿಗೆ ಸಂಬಂಧಿಕರು ಊಟ ಹಣ್ಣು ಹಂಪಲು ಕಳುಹಿಸುವಾಗ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಗಾಂಜಾ ಕಳುಹಿಸಲಾಗುತ್ತದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿ ಚಟುವಟಿಕೆಗೆ ಕಡಿವಾಣ ಹಾಕಲು ಕಾರಾಗೃಹದ ಮೇಲೆ ದಾಳಿ ಮಾಡಿದ್ದು, ಪ್ರತಿ ಬ್ಯಾರಕ್‌ನಲ್ಲೂ ತಪಾಸಣೆ ಮಾಡಲಾಗಿದೆ.
-ಸಂದೀಪ್ ಪಾಟೀಲ್, ಸಿಸಿಬಿ ಜಂಟಿ ಆಯುಕ್ತ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಕ್ಕಿರುವ ಬಹುತೇಕ ಮಾರಾಕಾಸ್ತ್ರಗಳನ್ನು ಜೈಲಿನಲ್ಲೇ ತಯಾರು ಮಾಡಿಕೊಂಡಿದ್ದಾರೆ. ಜೈಲಿನಲ್ಲಿರುವ ಚಮಚ, ತಟ್ಟೆಗಳು, ಗ್ಯಾಸ್ ಲೈಟರ್ ಸೇರಿದಂತೆ ವಿವಿಧ ವಸ್ತುಗಳಿಂದ ತಯಾರು ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News