×
Ad

​ಅ.10: ಪತ್ರಕರ್ತರ ಸಂಘದಿಂದ ಮಾದಕ ದ್ರವ್ಯ ವಿರುದ್ಧ ಜಾಗೃತಿ ಅಭಿಯಾನ

Update: 2019-10-09 18:28 IST

ಮಂಗಳೂರು, ಅ.9: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ದ.ಕ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದ.ಕ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಕೋಮುಸೌಹಾರ್ದತೆ, ಮಾದಕ ದ್ರವ್ಯ ಹಾಗೂ ಸೈಬರ್ ಕ್ರೈಂ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮವು ನಗರದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಅ.10ರಂದು ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಬೆಸೆಂಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ದೇವಾನಂದ ಪೈ ಅತಿಥಿಯಾಗಿ ಭಾಗವಹಿಸುವರು. ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News