ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ: ಕಾಂಗ್ರೆಸ್ ಹೈಕಮಾಂಡ್ ಘೋಷಣೆ

Update: 2019-10-09 15:15 GMT

ಬೆಂಗಳೂರು, ಅ.9: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಸಿದ್ದರಾಮಯ್ಯರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಈ ಘೋಷಣೆ ಮಾಡಿದ್ದಾರೆ.

ಹಿರಿಯ ಹಾಗೂ ಮೂಲ ಕಾಂಗ್ರೆಸ್ಸಿಗರ ತೀವ್ರ ವಿರೋಧದ ನಡುವೆಯೂ ವಿರೋಧ ಪಕ್ಷದ ನಾಯಕನ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ಸಂಬಂಧ ಹಿರಿಯ ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತ್ರಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್‌ಗೆ ವರದಿ ಒಪ್ಪಿಸಿದ್ದರು.

ಅದರಂತೆ, ಬುಧವಾರ ರಾತ್ರಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಆಪ್ತ ಎಸ್.ಆರ್.ಪಾಟೀಲ್‌ರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News