ವಿಧಾನಸಭೆ ಕಲಾಪ: ದೂರದರ್ಶನ ಕೇಂದ್ರದ ಮೂಲಕ ಖಾಸಗಿ ವಾಹಿನಿಗಳಿಗೆ ದೃಶ್ಯ ಸಂಪರ್ಕ

Update: 2019-10-09 15:19 GMT

ಬೆಂಗಳೂರು, ಅ.9: ರಾಜ್ಯ ವಿಧಾನಸಭೆಯ ಅಧಿವೇಶನ ಅ.10ರಿಂದ ಪ್ರಾರಂಭವಾಗುತ್ತಿದ್ದು, ಅಧಿವೇಶನದ ಕಾರ್ಯಕಲಾಪಗಳನ್ನು ಲೋಕಸಭೆಯ ಮಾದರಿಯಲ್ಲಿ ಚಿತ್ರೀಕರಿಸಿ ನೇರ ಪ್ರಸಾರ ಮಾಡಲು ಹಾಗೂ ಚಿತ್ರೀಕರಿಸಿದ ದೃಶ್ಯಗಳನ್ನು ಇತರೆ ಖಾಸಗಿ ಚಾನಲ್‌ಗಳಿಗೆ ಸಾಟಲೈಟ್ ಮೂಲಕ ಸಂಪರ್ಕವನ್ನು (Output) ಒದಗಿಸುವ ಕಾರ್ಯವನ್ನು ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ವಹಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತೀರ್ಮಾನಿಸಿದ್ದಾರೆ.

ಅದೇ ರೀತಿ ಸದನದ ಕಾರ್ಯಕಲಾಪಗಳ ಛಾಯಾಚಿತ್ರಗಳನ್ನು ತೆಗೆದು ಮುದ್ರಣ ಮಾಧ್ಯಮದವರಿಗೆ ಒದಗಿಸುವ ಕಾರ್ಯವನ್ನು ವಾರ್ತಾ ಇಲಾಖೆಯವರಿಗೆ ವಹಿಸಲಾಗಿದೆ. ಆದುದರಿಂದ, ಈ ಹಿಂದೆ ಜಾರಿಯಲ್ಲಿದ್ದಂತಹ ಪದ್ಧತಿಯ ಬದಲಾಗಿ, ಬೆಂಗಳೂರು ದೂರದರ್ಶನ ಕೇಂದ್ರದವರು ಚಿತ್ರೀಕರಿಸಿದ ವಿಧಾನಸಭೆಯ ಕಾರ್ಯಕಲಾಪಗಳ ಔಟ್‌ಪುಟ್ ಅನ್ನು ಖಾಸಗಿ ಸುದ್ದಿ ವಾಹಿನಿಯವರು ಈ ಕೆಳಕಂಡ ಲಿಂಕ್ ಅಡಿಯಲ್ಲಿ ಪಡೆಯಬಹುದಾಗಿದೆ.

1. C-Band Down-Link

Satellite                          :               G SAT-17, 93.5*E

Downlink Frequency      :               3981 MHz

Polarization                    :               Horizontal

Symbol rate                   :               2.9

Modulation                     :               QPSK

Compression                  :               MPEG-2;

2. Ku-Band Down-Link

Satellite                          :               G SAT-16, 55*E

Downlink Frequency      :               12527 MHz

Polarization                    :               Horizontal

Symbol rate                   :               2.9

Modulation                    :               8PSK

Compression                :               MPEG-2;

ಖಾಸಗಿ ಸುದ್ದಿ ವಾಹಿನಿಗಳು ಮೇಲ್ಕಂಡ ಸಂಪರ್ಕವನ್ನು ಪಡೆಯುವ ಪ್ರಕ್ರಿಯೆ ಕುರಿತು ಹಾಗೂ ಇದಕ್ಕೆ ಸಂಬಂಧಿಸಿದ ಯಾವುದೇ ಸಹಾಯ, ಸಹಕಾರ ಅವಶ್ಯವಿದ್ದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ಡೈರೆಕ್ಟರ್(ಇಂಜಿನಿಯರಿಂಗ್) ಆರ್.ವೆಂಕಟೇಶ್, ದೂರವಾಣಿ ಸಂಖ್ಯೆ: 94483 29565 ಇವರನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೇ, ಮುದ್ರಣ ಮಾಧ್ಯಮದವರು ಸದನದ ಕಾರ್ಯಕಲಾಪಗಳ ಛಾಯಾಚಿತ್ರಗಳನ್ನು ವಾರ್ತಾ ಇಲಾಖೆಯಿಂದ ಪಡೆಯಬಹುದಾಗಿದೆ.

ಈ ಹಿಂದೆ ಇದ್ದಂತೆ, ಸದನದ ಕಾರ್ಯಕಲಾಪಗಳನ್ನು ವರದಿ ಮಾಡುವ ವರದಿಗಾರರಿಗೆ ಮಾತ್ರ ಎಂದಿನಂತೆ ವಿಧಾನಸಭೆಯ ಸಭಾಂಗಣದ ಮೊದಲನೇ ಮತ್ತು ಎರಡನೇ ಮಹಡಿಯಲ್ಲಿರುವ ಪತ್ರಕರ್ತರ ಗ್ಯಾಲರಿಗೆ ಪ್ರವೇಶಿಸಲು ಅವಕಾಶವಿರುತ್ತದೆ.

ಆದರೆ, ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮರಾಮನ್ ಹಾಗೂ ಮುದ್ರಣ ಮಾಧ್ಯಮದ ಛಾಯಾಗ್ರಾಹಕರಿಗೆ ವಿಧಾನಸಭೆಯ ಸಭಾಂಗಣದೊಳಗೆ, ಎರಡನೇ ಮಹಡಿಯ ಪತ್ರಕರ್ತರ ಗ್ಯಾಲರಿಗೆ ಪ್ರವೇಶಾವಕಾಶವಿರುವುದಿಲ್ಲ. ವರದಿಗಾರರು ಸದನದ ಒಳಗೆ ಮೊಬೈಲ್ ದೂರವಾಣಿ, ಟ್ಯಾಬ್ ಇತ್ಯಾದಿಗಳನ್ನು ಕೊಂಡೊಯ್ಯುವಂತಿಲ್ಲ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News