ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Update: 2019-10-09 15:20 GMT

ಉಡುಪಿ, ಅ.9: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗ, ಆಪ್ತ ಸಮಾಲೋಚನಾ ಸಮಿತಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಇಲಾಖೆ ಅಜ್ಜರಕಾಡು ಇವರ ಸಂಯುಕ್ತ ಆಶ್ರಯ ದಲ್ಲಿ ಅ.10ರಂದು ಬೆಳಗ್ಗೆ 10 ಕ್ಕೆ ಉಡುಪಿಯ ಐಎಂಎ ಭವನದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಡೆಯಲಿದೆ.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಷಿ ಉದ್ಘಾಟಿಸ ಲಿದ್ದು, ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News