ಪಿಎಂ ಕಿಸಾನ್ ಯೋಜನೆ ಆಧಾರ್ ಜೋಡಣೆ ಅವಧಿ ವಿಸ್ತರಣೆ

Update: 2019-10-10 05:21 GMT

ಹೊಸದಿಲ್ಲಿ, ಅ.10: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್ ಯೋಜನೆ)ಯ ಪ್ರಯೋಜನ ಪಡೆಯುವವರು ಆಧಾರ್ ಕಾರ್ಡ್‌ನೊಂದಿಗೆ ಬ್ಯಾಂಕ್ ಖಾತೆಯನ್ನು ಜೋಡಿಸುವ ಅಂತಿಮ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ಪ್ರಯೋಜನ ಪಡೆಯುವವರು ಕಡ್ಡಾಯವಾಗಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಿಸಬೇಕಿದ್ದು ಈ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ನ.30ರವರೆಗೆ ವಿಸ್ತರಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಸದೀಯ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆಯಡಿ ಈಗಾಗಲೇ 7 ಕೋಟಿಗೂ ಹೆಚ್ಚಿನ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಈ ಯೋಜನೆಯಡಿ ರೈತರಿಗೆ ವರ್ಷಕ್ಕೆ 6 ಸಾವಿರ ರೂ.ಗಳ ನೆರವನ್ನು ಮೂರು ಸಮಾನ ಕಂತುಗಳಲ್ಲಿ ಒದಗಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News