ಮೊಬೈಲ್‌ ನೀಡಲು ನಿರಾಕರಿಸಿದ ಪೋಷಕರು: ವಿದ್ಯಾರ್ಥಿನಿ ಆತ್ಮಹತ್ಯೆ

Update: 2019-10-10 14:02 GMT

ಬೆಂಗಳೂರು, ಅ.10: ಮೊಬೈಲ್ ನೀಡಲು ಪೋಷಕರು ನಿರಾಕರಿಸಿದ ಕಾರಣ, ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ರಾಜಾಜಿನಗರದ 4ನೆ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಶಾಲೆಯಲ್ಲಿ 10ನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಬೆಸ್ಲಿ(16) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News