ಡಿಕೆಶಿ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ: ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಿ- ಹೈಕೋರ್ಟ್

Update: 2019-10-10 15:59 GMT

ಬೆಂಗಳೂರು, ಅ.10: ರಾಮನಗರ ಜಿಲ್ಲೆ ಕನಕಪುರ ತಾಲೂಕಿನಲ್ಲಿ ನಡೆದ ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಿ.ಎಸ್.ನಾರಾಯಣಸ್ವಾಮಿ ಮತ್ತು ಸಾಮಾಜಿಕ ಕಾರ್ಯಕರ್ತ ಎ.ಸಿ.ಶಿವರಾಜು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಕರ್ನಾಟಕ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರರಿಗೆ ಸೇರಿದ ಕಂಪೆನಿಗಳಿಂದ ಕಲ್ಲು ಗಣಿಗಾರಿಕೆ ನಡೆಸಿ ಕೋಟ್ಯಂತರ ರೂ.ನಷ್ಟವುಂಟು ಮಾಡಿದ್ದಾರೆ. ಹೀಗಾಗಿ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯ ವರದಿ ಸಲ್ಲಿಸಲು, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್‌ಗೆ ಮುಂದೂಡಿತು. ಈ ಹಿಂದೆ ಡಿ.ಕೆ.ಶಿವಕುಮಾರ್, ಡಿಕೆಶಿ ಪತ್ನಿ, ಡಿ.ಕೆ.ಸುರೇಶ್‌ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News