ದಂಡ ವಿಧಿಸಲು ಕರಡು ರೂಪಿಸಲಾಗಿದೆ: ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರಕಾರ

Update: 2019-10-10 16:05 GMT

ಬೆಂಗಳೂರು, ಅ.10: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಸಂಬಂಧ ಕರಡು ನಿಯಮಗಳನ್ನು ರೂಪಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ಕುರಿತ ಕರಡು ಅಧಿಸೂಚನೆಯನ್ನು ವಿಭಾಗೀಯ ನ್ಯಾಯಪೀಠಕ್ಕೆ ನೀಡಿದ ಸರಕಾರದ ಪರ ವಕೀಲರು, ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News