ಐಎಂಎ ಹಗರಣ: ಸಕ್ಷಮ ಪ್ರಾಧಿಕಾರ ರಚನೆ ತಡೆಗೆ ನಿರಾಕರಿಸಿದ ಹೈಕೋರ್ಟ್

Update: 2019-10-10 16:17 GMT

ಬೆಂಗಳೂರು, ಅ.10: ಐಎಂಎ ವಂಚನೆ ಪ್ರಕರಣದಲ್ಲಿ ಸಕ್ಷಮ ಪ್ರಾಧಿಕಾರ ರಚಿಸಿರುವ ಸರಕಾರದ ಆದೇಶ ರದ್ದುಕೋರಿ ಮನ್ಸೂರ್‌ ಖಾನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸರಕಾರದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ಸರಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.

ಐಎಂಎ ಸಮೂಹ ಕಂಪೆನಿಯ ಮಾಲಕ, ಷೇರುದಾರರಿಗೆ ಕೋಟ್ಯಂತರ ಹಣ ವಂಚಿಸಿದ ಪ್ರಕರಣದಲ್ಲಿ, ಈ ಹಿಂದೆ ಎಸ್‌ಐಟಿ ಬಂಧಿಸಿದ ಇಬ್ಬರು ಆರೋಪಿಗಳ ವಿರುದ್ಧ ಸಿಬಿಐ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆರೋಪಿಗಳಾದ ಮುಹಮ್ಮದ್ ಹನೀಫ್ ಅಫ್ಸರ್ ಅಝೀಝ್ ಮತ್ತು ಖಲೀಲ್ ಉಲ್ಲಾ ಜಮಾಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ 25ನೆ ಆರೋಪಿಯಾಗಿರುವ ಖಲೀಲ್ ಉಲ್ಲಾ ಜಮಾಲ್, ಐಎಂಎ ಕಂಪೆನಿಯಿಂದ ವಸೂಲಿ ಮಾಡಿದ ಹಣದಲ್ಲಿ ಪತ್ನಿ ಹೆಸರಿಗೆ ಆಸ್ತಿ ಖರೀದಿಸಿದ ಆರೋಪ ಎದುರಿಸುತ್ತಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಐಎಂಎ ಪ್ರಕರಣದಲ್ಲಿ ಈ ಇಬ್ಬರ ಪಾತ್ರದ ಬಗ್ಗೆ ತನಿಖೆ ಪೂರ್ಣಗೊಳಿಸಿದ ಬಳಿಕ, ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News