ಮಹಿಳೆ ಆತ್ಮಹತ್ಯೆ

Update: 2019-10-10 16:40 GMT

ಭಟ್ಕಳ: ತವರು ಮನೆಗೆಂದು ಬಂದಿದ್ದ ವಿವಾಹಿತ ಮಹಿಳೆಯೊಬ್ಬರು ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ರಾತ್ರಿ ತಾಲೂಕಿ ಶಿರಾಲಿ ಪಂಚಾಯತ್ ವ್ಯಾಪ್ತಿಯ ತಟ್ಟಿಹಕ್ಕಲ ಎಂಬ ಪ್ರದೇಶದಲ್ಲಿ ನಡೆದಿದೆ. 

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಆಶಾ ರಾಜೇಶ್ ನಾಯ್ಕ(28) ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಭಟ್ಕಳದ ಮನಕುಳಿ ನಿವಾಸಿ ರಾಜೇಶ ನಾಯ್ಕ ಎಂಬವರೊಂದಿಗೆ ಇವರ ವಿವಾಹವಾಗಿತ್ತು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಯಾವುದೇ ಕಾರಣ ಸ್ಪಷ್ಟವಾಗಿಲ್ಲ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News