ಯೆನೆಪೊಯ ಶಿಕ್ಷಕ ಪ್ರಶಸ್ತಿ: ಅರ್ಜಿ ಆಹ್ವಾನ

Update: 2019-10-10 16:48 GMT

ಮಂಗಳೂರು, ಅ.10: ದಿ ಯೆನೆಪೊಯ ಮೊಯಿದೀನ್ ಕುಂಞಿ ಮೆಮೋರಿಯಲ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಜಪ್ಪಿನಮೊಗರು ವತಿಯಿಂದ ದ.ಕ. ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾವಿಭಾಗದ ಶಿಕ್ಷಕರು/ಮುಖ್ಯೋಪಾಧ್ಯಾಯರನ್ನು ಪ್ರೋತ್ಸಾಹಿಸಲು ಶಿಕ್ಷಕ ಪ್ರಶಸ್ತಿ ನೀಡುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಸರಕಾರಿ/ಅನುದಾನಿತ/ಅನುದಾನರಹಿತ ಶಾಲಾ ಸಂಸ್ಥೆಗಳ ಶಿಕ್ಷಕರು ಅಥವಾ ರಾಜ್ಯ/ಕೇಂದ್ರ ಸರಕಾರದ ಶಿಕ್ಷಕ ವೃತ್ತಿಯಲ್ಲಿರುವವರು ಅರ್ಹರಾಗಿರುತ್ತಾರೆ. ಪ್ರಶಸ್ತಿಯು 10,000 ರೂ. ನಗದು ಬಹುಮಾನ ಮತ್ತು ಪ್ರಮಾಣಪತ್ರ ಒಳಗೊಂಡಿದೆ. ನ. 14ರಂದು ಸ್ಥಾಪಕರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಅರ್ಜಿ ಸಲ್ಲಿಸುವ ಶಿಕ್ಷಕರು ತಮ್ಮ ಅರ್ಜಿಯೊಂದಿಗೆ ಎಲ್ಲ ಅರ್ಹತಾ ಪ್ರಮಾಣಪತ್ರಗಳ ಪ್ರತಿಯನ್ನು ಶಾಲಾ ಮುಖ್ಯೋಪಾಧ್ಯಾಯರು/ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ದೃಢೀಕರಿಸತಕ್ಕದ್ದು. ಅರ್ಜಿ ಸಲ್ಲಿಸಲು ಬಯಸುವವರು ಅರ್ಜಿಯನ್ನು ದಿ ಯೆನೆಪೋಯ ಶಾಲಾ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಪ್ಪಿನಮೊಗರಿನ ದಿ ಯೆನೆಪೊಯ ಶಾಲೆಯ ಪ್ರಾಂಶುಪಾಲರನ್ನು ಅಥವಾ ದೂ.ಸಂ.: 0824-2241846/ 7025624387ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News