ಸ್ಯಾಕ್ಸೋ ಫೋನ್ ವಾದಕ ಕದ್ರಿ ಗೋಪಾಲನಾಥ್ ನಿಧನಕ್ಕೆ ಯಡಿಯೂರಪ್ಪ ಸಂತಾಪ

Update: 2019-10-11 16:21 GMT
ಕದ್ರಿ ಗೋಪಾಲನಾಥ್

ಬೆಂಗಳೂರು, ಅ. 11: ಖ್ಯಾತ ಸ್ಯಾಕ್ಸೋ ಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿದೇಶಿ ವಾದ್ಯವೊಂದನ್ನು ಶಾಸ್ತ್ರೀಯ ಸಂಗೀತಕ್ಕೆ ಹೊಂದಿಸಿಕೊಂಡು ಮಾಧುರ್ಯದ ಹೊನಲು ಹರಿಸಿದ ಶ್ರೇಷ್ಠ ಸಂಗೀತಗಾರ ಅವರು. ಅವರ ನಿಧನದಿಂದ ಸಂಗೀತ ಲೋಕದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

‘ಪದ್ಮಶ್ರೀ ಪುರಸ್ಕೃತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರು ನಿಧನರಾಗಿದ್ದು, ಸ್ಯಾಕ್ಸೋಫೋನ್ ಎಂಬ ಪಾಶ್ಚಾತ್ಯ ವಾದ್ಯದ ಕಲೆಯನ್ನು ಅವರು ತಮ್ಮದಾಗಿಸಿಕೊಂಡವರು. ಆ ಕ್ಷೇತ್ರವನ್ನು ಮೇರು ಹಂತಕ್ಕೇರಿಸಿದ ಅವರ ಸಾಧನೆ ಎಲ್ಲರಿಗೂ ಅನುಕರಣೀಯ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ’

-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News