×
Ad

ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Update: 2019-10-11 21:53 IST

ಬೆಂಗಳೂರು, ಅ.11: ನಗರದ ಪೀಣ್ಯಾದ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ನಿಲ್ಲಿಸಿದ್ದ ಬೈಕ್‌ಗೆ ಗುರುವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಮಹದೇಶ್ವರಪ್ಪ ಎಂಬುವವರು ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ್ದು, ಬೆಂಕಿಯಿಂದ ಇಡೀ ಬೈಕ್ ಸುಟ್ಟುಹೋಗಿದೆ. ಈ ಸಂಬಂಧ ಪೀಣ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News